×
Ad

ಗಾಂಜಾ ಮಾರಾಟದ ಕಿಂಗ್‌ಫಿನ್‌ಗಳನ್ನು ಪತ್ತೆಹಚ್ಚಿ ಕ್ರಮ: ಐಜಿಪಿ ದೇವಜ್ಯೋತಿ ರಾಯ್

Update: 2020-03-18 20:54 IST

ಕುಂದಾಪುರ, ಮಾ.18: ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುವ ಕಿಂಗ್‌ಫಿನ್‌ಗಳನ್ನು ಪತ್ತೆಹಚ್ಚಿ ನಿರ್ದಾಕ್ಷಿಣ್ಯಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪಶ್ಚಿಮ ವಲಯ ನೂತನ ಐಜಿಪಿ ದೇವಜ್ಯೋತಿ ರಾಯ್ ಹೇಳಿದ್ದಾರೆ.

ಕುಂದಾಪುರ ಪೊಲೀಸ್ ಉಪವಿಭಾಗ ಕಚೇರಿಯಲ್ಲಿ ಇಂದು ಉಪವಿಭಾಗ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ದವರೊಂದಿಗೆ ಮಾತನಾಡುತಿದ್ದರು.

ಜಿಲ್ಲೆಯಾದ್ಯಂತ ಆನ್‌ಲೈನ್ ಮೂಲಕ ನಡೆಯುವ ಕ್ರಿಕೆಟ್ ಹಾಗೂ ಇತರೆ ಕ್ರೀಡೆಗಳ ಬೆಟ್ಟಿಂಗ್, ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಕ್ರಮ ಜರಗಿಸು ವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅದೇ ರೀತಿ ಅಕ್ರಮ ಮರಳು ಗಾರಿಕೆ ಹಾಗೂ ಕಲ್ಲು ಗಣಿಗಾರಿಕೆಯ ವಿರುದ್ಧ ಕಠಿಣ ಕ್ರಮ ಜರಗಿಸಲಾಗು ವುದು. ಇಂತಹ ಅಕ್ರಮಗಳ ಬಗ್ಗೆ ಸಾರ್ವಜನಿಕರು ನಿರ್ಭೀತಿಯಿಂದ ಪೊಲೀಸ ರಿಗೆ ಮಾಹಿತಿ ನೀಡಬಹುದು ಎಂದರು.

ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡದ ಕಾಮಗಾರಿಯಲ್ಲಿ ಲೋಪ ಕಂಡುಬಂದಿದ್ದು, ಅದನ್ನು ಸರಿಪಡಿಸಲು ಈಗಾಗಲೇ ಸೂಚಿಸಲಾಗಿದೆ. ಇದನ್ನು ಸರಿಪಡಿಸಿ ಒಂದೆರಡು ವಾರದಲ್ಲಿ ಠಾಣೆಯನ್ನು ಉದ್ಘಾಟಿಸಲಾಗುವುದು. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ನಕ್ಸಲ್ ಚಟುವಟಿಕೆ ಕುರಿತು ಸದ್ಯಕ್ಕೆ ಯಾವುದೇ ಮಾಹಿತಿಗಳಿಲ್ಲ. ಅಂತಹ ಚಟುವಟಿಕೆ ಕಂಡುಬಂದರೆ ಪೊಲೀಸರು ಅಗತ್ಯಕ್ರಮ ಕೈಗೊ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಕುಂದಾಪುರದಲ್ಲಿ ಮಹಿಳಾ ಠಾಣೆ ಸ್ಥಾಪಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಐಜಿಪಿ, ಸದ್ಯ ಜಿಲ್ಲೆಗೊಂದು ಮಹಿಳಾ ಠಾಣೆ ಸ್ಥಾಪಿಸಲು ಅವಕಾಶ ಇದ್ದು, ಅದರಂತೆ ಉಡುಪಿಯಲ್ಲಿ ಒಂದು ಠಾಣೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಕುಂದಾಪುರದಲ್ಲಿ ಮಹಿಳಾ ಠಾಣೆ ಸ್ಥಾಪಿಸುವ ಕುರಿತು ಪರಿಶೀಲಿಸಿ ಪ್ರಸ್ತಾವನೆ ಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕುಂದಾಪುರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News