×
Ad

ಇನ್ನೆರಡು ದಿನ ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Update: 2020-03-18 21:44 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.18: ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News