ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರಕ್ಕೆ ಪ್ರಸ್ತಾವನೆ: ಡಿಸಿ ಜಗದೀಶ್ ಸೂಚನೆ
Update: 2020-03-18 22:14 IST
ಉಡುಪಿ, ಮಾ.18: ಶೇಂಗಾದ ಮಾರುಕಟ್ಟೆ ಧಾರಣೆ ಕುಸಿದಿರುವುದರಿಂದ ಜಿಲ್ಲೆಯ ರೈತರಿಂದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿಸುವ ಬಗ್ಗೆ ಸರಕಾರಕ್ಕೆ ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ, ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಪ್ರಸ್ತುತ ಮಾರುಕಟ್ಟೆಯಲ್ಲಿ ಶೇಂಗಾ ದರವು ಕ್ವಿಂಟಾಲ್‌ಗೆ ರೂ.4500ರಿಂದ 4800 ಇದ್ದು, ಕೇಂದ್ರ ಸರಕಾರವು 2019-20ನೇ ಮುಂಗಾರು ಹಂಗಾಮಿಗೆ ಎಫ್‌ಎಕ್ಯೂ ಗುಣಮಟ್ಟದ ಶೇಂಗಾಕ್ಕೆ ಕ್ವಿಂಟಾಲ್‌ಗೆ ರೂ. 5,090 ಎಂದು ನಿಗದಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಶೇಂಗಾ ಖರೀದಿ ಕೇಂದ್ರ ತೆರೆಯು ವುದರಿಂದ ಜಿಲ್ಲೆಯ ರೈತರಿಗೆ ಸಹಾಯಕವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಮತ್ತು ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.