×
Ad

ಮಂಗಳೂರು : ರೈಲಿನಲ್ಲಿ ಅಕ್ರಮ ಚಿನ್ನ ಸಾಗಾಟ; ಏಳು ಮಂದಿ ಸೆರೆ

Update: 2020-03-19 15:23 IST

ಮಂಗಳೂರು: ರೈಲಿನಲ್ಲಿ ಭಾರಿ ಪ್ರಮಾಣದಲ್ಲಿ ಚಿನ್ನ ಸಾಗಾಟವನ್ನು ಪತ್ತೆ ಹಚ್ಚಿದ ಡೈರೆಕ್ಟೋರೆಟ್ ಆಪ್ ರೆವಿನ್ಯೂ ಇಂಟಲಿಜೆನ್ಸ್ ಅಧಿಕಾರಿಗಳು  ಕಾರ್ಯಾಚರಣೆಯಲ್ಲಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕ್ಯಾಲಿಕೆಟ್ ನಿಂದ ಮಂಗಳೂರಿಗೆ ರೈಲಿನಲ್ಲಿ ಸೈಯ್ಯದ್ ಮುಹಮ್ಮದ್ ಮತ್ತು ಅಶೋಕ ಕೆ ಎಸ್ ಎಂಬಿಬ್ಬರು ಚಿನ್ನ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಇವರಿಂದ ಸುಮಾರು 5.6 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.

ಚಿನ್ನ ಸಾಗಾಟದ ಬೆನ್ನತ್ತಿದ್ದ ಅಧಿಕಾರಿಗಳು ಮಂಗಳೂರು, ಉಡುಪಿ, ಶಿವಮೊಗ್ಗ ದಲ್ಲಿ ದಾಳಿ ನಡೆಸಿ ಬಳಿಕ ಚಿನ್ನವನ್ನು ಸಾಗಿಸಿದ ಕ್ಯಾಲಿಕಟ್ ಜ್ಯುವೆಲ್ಲರಿಗೂ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ 4 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು 84 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಚಿನ್ನ ಸಾಗಾಟದ ಮಾಸ್ಟರ್ ಮೈಂಡ್ ನವೀನ್ ಚಂದ್ರ ಕಾಮತ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ 40 ಮಂದಿ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News