ವಿಶ್ವ ರಂಗಭೂಮಿ ದಿನಾಚರಣೆ ರದ್ದು
Update: 2020-03-19 20:33 IST
ಉಡುಪಿ, ಮಾ.19: ಕರ್ನಾಟಕ ರಾಜ್ಯ ಸರಕಾರದ ಆದೇಶದ ಮೇರೆಗೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಎಲ್ಲಾ ಜಿಲ್ಲೆಗಳಲ್ಲೂ‘ವಿಶ್ವ ರಂಗಭೂಮಿ ದಿನಾಚರಣೆ’ ಕಾರ್ಯಕ್ರಮವನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಉಡುಪಿಯ ರಂಗಭೂಮಿಯ ವತಿಯಿಂದ ಮಾ.27 ಮತ್ತು 28ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶ್ವ ರಂಗಭೂಮಿ ದಿನಾಚರಣೆ ಹಾಗೂ ನಾಟಕೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ರಂಗಭೂಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.