×
Ad

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತಪಾಸಣೆ: ವಿ.ವಿ.ರಾವ್

Update: 2020-03-19 21:01 IST

ಮಂಗಳೂರು, ಮಾ.19: ಕೇಂದ್ರ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾರ್ಗಸೂಚಿಯಂತೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರಿಗೆ ಶೇ.100ರಷ್ಟು ತಪಾಸಣೆ ಮಾಡಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ.ರಾವ್ ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಆರೋಗ್ಯ ಕಾರ್ಯಕರ್ತರು ಇನ್‌ಫ್ರಾರೆಡ್ ಥರ್ಮೊಮೀಟರ್ಸ್‌ನಿಂದ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ಅಲ್ಲದೆ, ಕೊರೋನ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಬ್ಯಾನರ್‌ಗಳು, ಸ್ಯಾನಿಟೈಝರ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ವಿಮಾನ ನಿಲ್ದಾಣದಲ್ಲಿನ ಎಸ್ಕಲೇಟರ್, ಎವೆಲೇಟರ್ಸ್, ಕನ್ವೇಯರ್ ಬೆಲ್ಟ್, ಹಿಡಿಕೆಗಳು, ಟೇಬಲ್, ಕುರ್ಚಿಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಈ ಪ್ರಕ್ರಿಯೆಯು ಪ್ರತಿ ವಿಮಾನದ ಆಗಮನದ ಬಳಿಕ ಸ್ವಚ್ಛತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿನ ಎಲ್ಲ ಏಜೆನ್ಸಿಗಳಿಗೆ ತಮಗೆ ಸಂಬಂಧಿಸಿದ ಪ್ರಯಾಣಿಕರಿಗೆ ಮಾಸ್ಕ್, ಗ್ಲೋವ್ಸ್, ಸ್ಯಾನಿಟೈಝರ್ ವಿತರಿಸಲು ಸೂಚಿಸಲಾಗಿದೆ. ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ.ರಾವ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News