×
Ad

ಯುವತಿ ನಾಪತ್ತೆ

Update: 2020-03-19 22:15 IST

ಉಡುಪಿ, ಮಾ.19:ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರು ರಾಜೀವ ನಗರದ ನಿವಾಸಿ ಜಾನಕಿ ಮಹಾದೇವರ ಮಗಳು ಸಂಪದಾ (21) ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ಅಂತಿಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿನಿ ಯಾಗಿದ್ದು, ಮಾ.14ರಂದು ಬೆಳಗ್ಗೆ 11:30ಕ್ಕೆ ಮನೆಯಿಂದ ಹೋದವಳು ಇದುವರೆಗೆ ಮನೆಗೆ ಬಾರದೇ ಕಾಣೆಯಾಗಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ: 5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಬಾಷೆ ಬಲ್ಲವರಾಗಿದ್ದಾಳೆ. ಇವಳ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉಡುಪಿ ನಗರ ಪೊಲಿೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News