×
Ad

ಆಂಧ್ರಪ್ರದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಪ್ರಕರಣ ದೃಢ

Update: 2020-03-19 22:27 IST

ಆಂಧ್ರಪ್ರದೇಶ, ಮಾ. 19: ಆಂಧ್ರಪ್ರದೇಶದಲ್ಲಿ ಕೊರೋನ ವೈರಸ್ ಸೋಂಕಿನ ಎರಡನೇ ಪ್ರಕರಣವನ್ನು ರಾಜ್ಯ ಸರಕಾರ ಗುರುವಾರ ದೃಢಪಡಿಸಿದೆ.

 ಲಂಡನ್‌ಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರು ಮಾರ್ಚ್ 15ರಂದು ಭಾರತಕ್ಕೆ ಹಿಂದಿರುಗಿದ್ದರು. ಕೊರೋನ ವೈರಸ್ ಸೋಂಕಿನ ಲಕ್ಷಣವಾದ ಶೀತ, ಒಣ ಕೆಮ್ಮು ಹಾಗೂ ಜ್ವರದ ಹಿನ್ನೆಲೆಯಲ್ಲಿ ಅವರನ್ನು ಒಂಗೋಲದ ಆಸ್ಪತ್ರೆಯಲ್ಲಿ ದಾಖಲಿಸಿ ನಿಗಾದಲ್ಲಿ ಇರಿಸಲಾಗಿದೆ. ಪ್ರಾಥಮಿಕ ಪರೀಕ್ಷೆ ನಡೆಸಿದ ಬಳಿಕ ಅವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ತಿರುಪತಿಯ ವೈರಾಲಜಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಅಲ್ಲಿಂದ ವರದಿ ಬಂದಿದ್ದು, ಅವರಿಗೆ ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.

ಇಟಲಿಗೆ ಭೇಟಿ ನೀಡಿದ್ದ ನೆಲ್ಲೂರಿನ ವ್ಯಕ್ತಿಗೆ ಕೊರೋನ ವೈರಸ್ ಸೋಂಕು ಆಗಿರುವುದು ರಾಜ್ಯದ ಮೊದಲ ಪ್ರಕರಣ ಎಂದು ಜಗನ್ಮೋಹನ್ ರೆಡ್ಡಿ ನೇತೃತ್ವದ ಸರಕಾರ ಮಾಹಿತಿ ನೀಡಿತ್ತು. ಅವರಿಗೆ ನೆಲ್ಲೂರು ಸರಕಾರಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ರಾಜ್ಯದ ಮೂವರಿಗೆ ಕೊರೋನ ವೈರಸ್ ಸೋಂಕು ತಗಲಿರುವ ಶಂಕೆ ಉಂಟಾಗಿದೆ. ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಂಧ್ರದಲ್ಲಿ ಇದುವರೆಗೆ 105 ಮಂದಿಯ ರಕ್ತ ಹಾಗೂ ಗಂಟಲು ದ್ರವದ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 96 ಮಂದಿಗೆ ಕೊರೋನ ವೈರಸ್ ಸೋಂಕು ತಗಲಿರಲ್ಲ. ಇಬ್ಬರಿಗೆ ತಗುಲಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News