ಬಸ್ ನಿಲ್ಲಿಸದೆ ವಿದ್ಯಾರ್ಥಿ ಪ್ರಾಣಹಾನಿಗೆ ಕಾರಣರಾಗಿದ್ದರೆ ಅಪರಾಧ: ಬಸವರಾಜ ಬೊಮ್ಮಾಯಿ

Update: 2020-03-19 18:14 GMT

ಬೆಂಗಳೂರು, ಮಾ. 19: ಎದೆನೋವು ಎಂದರೂ ಬಸ್ ನಿಲ್ಲಿಸದೆ ಯುವಕನ ಪ್ರಾಣ ಹಾನಿಗೆ ಕಾರಣರಾಗಿದ್ದರೆ ಅದು ಅಪರಾಧ. ಸಾರಿಗೆ ಸಚಿವರಿಂದ ಪ್ರಕರಣದ ಬಗ್ಗೆ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಗುರುವಾರ ವಿಧಾನಸಭೆ ಶೂನ್ಯವೇಳೆ ಶಾಸಕ ಉಮಾನಾಥ್ ಕೋಟ್ಯಾನ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಹೃದಯಾಘಾತಕ್ಕೊಳಗಾದ ಯುವಕನಿಗೆ ಚಿಕಿತ್ಸೆ ಕೊಡಿಸದೆ ಮಾರ್ಗಮಧ್ಯೆದಲ್ಲೇ ಆತನ ಸಾವಿಗೆ ಕಾರಣರಾದ ಖಾಸಗಿ ಬಸ್‌ನ ಮಾಲಕರು ಮತ್ತು ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಕೋಟ್ಯಾನ್, ಮಾ.7ರಂದು ಉಡುಪಿಯಿಂದ ಬೆಂಗಳೂರಿಗೆ ಸುಹಾನ್(22) ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಗಾಂಭ ಎಂಬ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಿಲ್ಲಿಸದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News