ತಿಪಟೂರು: ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಹೆಣ್ಣು ಚಿರತೆ ಸೆರೆ
Update: 2020-03-20 18:05 IST
ತುಮಕೂರು, ಮಾ.20: ಜಿಲ್ಲೆಯ ತಿಪಟೂರು ತಾಲೂಕು ನೊಣವಿನಕೆರೆ ಹೋಬಳಿ ಕನ್ನುಘಟ್ಟ ಗ್ರಾಮದ ಬಳಿ ಕಳೆದ ನಾಲ್ಕೈದು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿ ಸಾಕು ಪ್ರಾಣಿಗಳನ್ನು ಭಕ್ಷಿಸುತ್ತಿದ್ದ ಸುಮಾರು 2.5 ವರ್ಷದ ಹೆಣ್ಣು ಚಿರತೆಯನ್ನು ತಿಪಟೂರು ವಲಯದ ಅರಣ್ಯ ಸಿಬ್ಬಂದಿಗಳು ಇಂದು ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿದಿದ್ದು, ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತುಮಕೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.