ಕೊರೋನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆ ಮೀಸಲಿಡುವ ಬಗ್ಗೆ ಚರ್ಚೆ: ಸಚಿವ ಶ್ರೀರಾಮುಲು

Update: 2020-03-20 13:04 GMT

ಬೆಂಗಳೂರು, ಮಾ.20: ಕೊರೋನ ಸೋಂಕಿತರ ಚಿಕಿತ್ಸೆ ಸಂಬಂಧ ವಿಕ್ಟೋರಿಯ ಆಸ್ಪತ್ರೆಯನ್ನು ಸಂಪೂರ್ಣವಾಗಿ ಮೀಸಲಿಡುವ ಬಗ್ಗೆ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು. 

ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು 2 ಸಾವಿರ ಹಾಸಿಗೆಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿವೆ. ಅದೇ ರೀತಿ, ಕೆ.ಸಿ.ಜನರಲ್ ಆಸ್ಪತ್ರೆ 400, ಜಯನಗರ ಆಸ್ಪತ್ರೆ 400, ಕಿಮ್ಸ್ 1 ಸಾವಿರ ಹಾಸಿಗೆಗಳಿವೆ. ಹಾಗಾಗಿ, ತುರ್ತು ಅಗತ್ಯವಿದ್ದಲ್ಲಿ, ಈ ಆಸ್ಪತ್ರೆಗಳನ್ನು ಸಂಪೂರ್ಣವಾಗಿ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.

ಬೇರೆ ಬೇರೆ ಕಡೆಯಿರುವ ರೋಗಿಗಳನ್ನು ಒಂದೆಡೆ ಸೇರಿಸಿ ಚಿಕಿತ್ಸೆ ನೀಡುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದ ಅವರು, ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ರೋಗಿಗಳನ್ನು ಇತರೆ ಸರಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಪೂರ್ಣ ಪ್ರಮಾಣದಲ್ಲಿ ಕೊರೋನ ಸೋಂಕಿತರ ಚಿಕಿತ್ಸೆಗೆ ಬಳಸಿಕೊಳ್ಳುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News