×
Ad

ವಿಧಾನಸಭೆಯಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ

Update: 2020-03-20 19:42 IST

ಬೆಂಗಳೂರು, ಮಾ.20: ಗುಲ್ಬರ್ಗಾ ವಿಶ್ವವಿದ್ಯಾನಿಲಯವು ಸಂಯೋಜಿತ ಕಾಲೇಜುಗಳ ಸಂಬಂಧದಲ್ಲಿ ಅತಿದೊಡ್ಡ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಅನಾನುಕೂಲತೆಯ ಕೆಲಸದೊತ್ತಡವನ್ನು ಕಡಿಮೆ ಮಾಡಬೇಕಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತವನ್ನು ಪ್ರವರ್ಧಿಸುವುದಕ್ಕೆ ಹಾಗೂ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನೆಯನ್ನು ಕಡಿಮೆಯಾಗಿಸಲೂ ಮತ್ತು ಈ ಪ್ರದೇಶದ ಅಭಿವೃದ್ಧಿಗೆ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗಾಗಿ ರಾಯಚೂರು ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸುವುದು ಅಗತ್ಯವಾಗಿದೆ.

ಗುಲ್ಬರ್ಗ ವಿಶ್ವವಿದ್ಯಾನಿಲಯವನ್ನು ವಿಭಜಿಸುವುದಕ್ಕೆ ಹಾಗೂ ರಾಯಚೂರು ಮತ್ತು ಯಾದಗಿರಿ ಜಿಲ್ಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ, ರಾಯಚೂರಿನಲ್ಲಿ ಕೇಂದ್ರ ಕಾರ್ಯ ಸ್ಥಾನದೊಂದಿಗೆ ರಾಯಚೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವುದಕ್ಕಾಗಿ ತಂದಿದ್ದ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ-2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿತು.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪೈಕಿ ನೋಟಾ ಕುರಿತು ಮತಪತ್ರಗಳಲ್ಲಿ ಹಾಗೂ ವಿದ್ಯುನ್ಮಾನ ಮತಯಂತ್ರದಲ್ಲಿ ಮತದಾರರಿಗೆ ಆಯ್ಕೆಯನ್ನು ನೀಡಲು ಕರ್ನಾಟಕ ಪೌರ ಸಭೆಗಳ ಅಧಿನಿಯಮ, 1964ನ್ನು ಮತ್ತು ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 1976ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಿ ಮಂಡಿಸಿದ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ 2020ಗೆ ಅಂಗೀಕಾರ ಸಿಕ್ಕಿತು.

ಅನುಮತಿ ಇಲ್ಲದೆ ಅಥವಾ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳ ಮೇಲಿನ ಸ್ವತ್ತು ತೆರಿಗೆ ಮತ್ತು ಸ್ವತ್ತು ತೆರಿಗೆಗೆ ಸಮಾನವಾದ ದಂಡವನ್ನು ಸಂಗ್ರಹಿಸುವ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕ್ಷೇತ್ರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣವನ್ನು ನಿಯಂತ್ರಿಸಲು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹಾಕಲಾದ ಆಪ್ಟಿಕಲ್ ಫೈಬರ್ ಕೇಬಲ್‌ಗಳನ್ನು ಒಳಗೊಂಡಂತೆ ಕೇಬಲ್ಲಿನ ಮೇಲೆ ಶುಲ್ಕಗಳನ್ನು ಮತ್ತು ವಾರ್ಷಿಕ ಟ್ರಾಕ್ ಬಾಡಿಗೆಯನ್ನು ವಿಧಿಸುವುದಕ್ಕಾಗಿ ಮಂಡಿಸಿದ ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2020, ಕರ್ನಾಟಕ ಬಹಿರಂಗ ಸ್ಥಳಗಳ(ವಿರೂಪಗೊಳಿಸುದನ್ನು ಪ್ರತಿಬಂಧಿಸುವ)(ತಿದ್ದುಪಡಿ) ವಿಧೇಯಕ-2020ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News