×
Ad

ಉಡುಪಿ: ಆರ್‌ಟಿಓ ಕಚೇರಿಯಲ್ಲಿ ಕಲಿಕಾ ಲೈಸನ್ಸ್, ಚಾಲನಾ ಲೈಸನ್ಸ್ ಪರೀಕ್ಷೆಗಳು ರದ್ದು

Update: 2020-03-20 20:16 IST

ಉಡುಪಿ, ಮಾ.20: ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಬೆಂಗಳೂರು ಇವರ ಮಾ.19ರ ಸುತ್ತೋಲೆಯಂತೆ, ಕೊರೋನ ವೈರಸ್ ಹರಡದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಹೆಚ್ಚಿನ ಜನದಟ್ಟಣೆಯನ್ನು ನಿರ್ಂಧಿಸಲು, ಉಡುಪಿ ಜಿಲ್ಲೆಯ ಸಾರಿಗೆ ಕಚೇರಿಯಲ್ಲಿ ಮಾ.20ರಿಂದ ಮುಂದಿನ ಆದೇಶದವರೆಗೆ ಹೊಸದಾಗಿ ಕಲಿಕಾ ಲೈಸನ್ಸ್ ಮತ್ತು ಚಾಲನಾ ಲೈಸನ್ಸ್‌ಗಳಿಗಾಗಿ ಪರೀಕ್ಷೆಗೆ ಹಾಜರಾಗುವುನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

ಅಲ್ಲದೇ ಎ.15ರವರೆಗೆ ಸಿಂಧುತ್ವ ಹೊಂದಿರುವ ಕಲಿಕಾ ಲೈಸನ್ಸ್ ಹೊಂದಿರುವ ಅ್ಯರ್ಥಿಗಳಿಗೆ ಮಾತ್ರ ಹೊಸ ಚಾಲನಾ ಅನುಜ್ಞಾ ಪತ್ರ ಪರೀಕ್ಷೆಗೆ ಹಾಜರಾಗಲು ಅವಕಾಶವಿರುತ್ತದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಎ. ರಾಮಕೃಷ್ಣ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News