ಕಾಸರಗೋಡು ಜೊತೆಗಿನ ಎಲ್ಲಾ ಸಂಪರ್ಕ ಕಡಿತಗೊಳಿಸಿ: ಕೊಡಗು ಜಿಲ್ಲಾಧಿಕಾರಿ ಆದೇಶ
Update: 2020-03-20 21:45 IST
ಮಡಿಕೇರಿ, ಮಾ.20: ಕೊಡಗು ಜಿಲ್ಲೆಯ ನೆರೆ ರಾಜ್ಯವಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 6 ಕೊರೋನ ವೈರಸ್ ಪ್ರಕರಣಗಳು ದೃಢಪಟ್ಟಿರುವುದರಿಂದ (ಪಾಸಿಟಿವ್) ಕಾಸರಗೋಡು ಜಿಲ್ಲೆಯೊಂದಿಗಿನ ಎಲ್ಲಾ ಸಂಪರ್ಕವನ್ನು ಕಡಿತಗೊಳಿಸಿ ಆದೇಶಿಸಲಾಗಿದೆ.
ಕಾಸರಗೋಡು ಜಿಲ್ಲೆಯಿಂದ ಕೊಡಗು ಜಿಲ್ಲೆಗೆ ಅಥವಾ ಕೊಡಗು ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಕರಿಕೆ ಚೆಕ್ ಪೋಸ್ಟ್ ಮೂಲಕ ತೆರಳುವ ಎಲ್ಲಾ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.