×
Ad

ಚಾಮರಾಜನಗರ ಜಿಲ್ಲೆಯಲ್ಲಿ ಯಾವುದೇ ಕೊರೋನ ಸೋಂಕು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಡಾ.ರವಿ

Update: 2020-03-20 23:52 IST

ಚಾಮರಾಜನಗರ, ಮಾ.20: ಜಿಲ್ಲೆಯಲ್ಲಿ ವಿದೇಶದಿಂದ ಆಗಮಿಸಿದವರ 33 ಮಂದಿಯ ಪೈಕಿ ಮೂವರು ವ್ಯಕ್ತಿಗಳ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಈ ಸಂಬಂಧ ಪ್ರಾವಿಷನಲ್ ವರದಿ ಬಂದಿದ್ದು, ಮೂವರ ಪರೀಕ್ಷಾ ವರದಿಯಲ್ಲೂ ನೆಗೆಟಿವ್ ಬಂದಿದೆ. ಯಾವುದೇ ಸೋಂಕು ಕಂಡುಬಂದಿಲ್ಲ ಎಂದು ವರದಿ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ  ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾಧಿಕಾರಿ, ಜಿಲ್ಲೆಗೆ ವಿದೇಶದಿಂದ ಆಗಮಿಸಿದವರ ಪೈಕಿ ತಪಾಸಣೆ ನಡೆಸಿ ಮೂವರು ವ್ಯಕ್ತಿಗಳ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಮೈಸೂರಿನ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ವರದಿಯು ಬಂದಿದ್ದು, ನೆಗೆಟಿವ್ ಆಗಿದೆ. ಆದರೂ ಸಹ ಈ ಮೂವರನ್ನು ಆಸ್ಪತ್ರೆಯಲ್ಲಿಯೇ ಇರಿಸಿ ಅವರ ಆರೋಗ್ಯದ ಮೇಲೆ ನಿಗಾವಣೆ ಮುಂದುವರಿಸಲಾಗಿದೆ. ಇಂದೂ ಸಹ ವಿದೇಶದಿಂದ 10 ಜನರು ಬಂದಿದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಈ ಎಲ್ಲರನ್ನು ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದುವರೆಗೆ 33 ಮಂದಿ ವಿದೇಶದಿಂದ ಜಿಲ್ಲೆಗೆ ಬಂದವರಾಗಿದ್ದಾರೆ. 26 ಮಂದಿಯನ್ನು ಮನೆಯಲ್ಲಿಯೇ ಪ್ರತ್ಯೇಕಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಲ್ವರು 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News