'ಜನತಾ ಕರ್ಫ್ಯೂ' ಪಾಲಿಸದಿದ್ದರೆ ಕಾನೂನು ಕ್ರಮ ಎಂದ ಬೆಂಗಳೂರು ಪೊಲೀಸ್ ಆಯುಕ್ತರ ಹೇಳಿಕೆಗೆ ಬಿಎಸ್‌ವೈ ಗರಂ

Update: 2020-03-21 14:30 GMT

ಬೆಂಗಳೂರು, ಮಾ.21: ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಅನುಷ್ಟಾನಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇಲ್ಲದಿದ್ದರೆ, ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಸಿದ್ದಾರೆ. ಆದರೆ ಭಾಸ್ಕರ್ ರಾವ್ ಹೇಳಿಕೆಗೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದು, ಯಾವನ್ರಿ ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ.

'ಮಾ.22ರಂದು ದೇಶಾದ್ಯಂತ ಜನತಾ ಕರ್ಪ್ಯೂ ಘೋಷಿಸಿರುವ ಹಿನ್ನೆಲೆ ಆರೋಗ್ಯದ ದೃಷ್ಟಿಯಿಂದಾಗಿ ಮುಂಜಾಗ್ರತಾ ಕ್ರಮಗಳನ್ನು ಪ್ರತಿಯೊಬ್ಬರು ಪಾಲಿಸಿದರೆ ಉತ್ತಮ. ಇಲ್ಲದಿದ್ದರೆ, ಐಪಿಸಿ ಸೆಕ್ಷನ್ 269, 270 ಅಡಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ. ಆದರೆ ಪೊಲೀಸ್ ಆಯುಕ್ತರ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ರೀತಿ ಆದೇಶ ನೀಡಲು ಯಾರು ಹೇಳಿದ್ದು ಎಂದು ಆಯುಕ್ತರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News