ಕೊರೋನವೈರಸ್: 11,000 ದಾಟಿದ ಮೃತರ ಸಂಖ್ಯೆ
Update: 2020-03-21 23:22 IST
ವಾಶಿಂಗ್ಟನ್, ಮಾ. 21: ಕೊರೋನವೈರಸ್‌ನಿಂದಾಗಿ ಜಾಗತಿಕ ಮಟ್ಟದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 11,000ವನ್ನು ದಾಟಿದೆ ಎಂದು ಅಮೆರಿಕದ ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾನಿಲಯದ ಅಂಕಿಅಂಶಗಳು ತಿಳಿಸಿವೆ.
2,77,000ಕ್ಕೂ ಅಧಿಕ ಮಂದಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾಗಿದ್ದಾರೆ ಹಾಗೂ ಸುಮಾರು 88,000 ಮಂದಿ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.
ಸ್ಪೇನ್‌ನಲ್ಲಿ ಕೊರೋನವೈರಸ್‌ನಿಂದಾಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ 1,300ನ್ನು ದಾಟಿದೆ.