×
Ad

ಜನತಾ ಕರ್ಫ್ಯೂ: ಬೆಂಗಳೂರಿನ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್

Update: 2020-03-21 23:26 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.21: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಸರಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲು ನಿರ್ಧರಿಸಿದೆ ಎಂಬ ಮಾಹಿತಿ ಸಿಕ್ಕಿದೆ.

ಸುಮಾರು 177 ಆಸ್ಪತ್ರೆಯ ಒಪಿಡಿಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ತುರ್ತು ಸೇವೆ ಎಂದಿನಂತೆ ಇರಲಿದೆ. ಸರಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ಆಸ್ಪತ್ರೆಗಳೂ ಒಪಿಡಿ ಕೂಡ ಬಂದ್ ಮಾಡಲು ನಿರ್ಧರಿಸಿವೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News