ಮಂಗಳೂರು ವಿ.ವಿ ವಿದ್ಯಾರ್ಥಿಗಳಿಗೆ ರಜೆ
Update: 2020-03-21 23:50 IST
ಮಂಗಳೂರು, ಮಾ.21: ಕೊರೋನ ವೈರಸ್ ವಿಶ್ವವ್ಯಾಪ್ತಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಮಾ.14ರಿಂದ ರಜೆ ಘೋಷಿಸಲಾಗಿರುತ್ತದೆ.
ಮುಂಜಾಗೃತಾ ಕ್ರಮವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುರ್ತು ಸೇವೆಗಳ ಹೊರತಾಗಿ ಇತರ ಎಲ್ಲಾ ಸೇವೆಗಳನ್ನು ಮಾ.31ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟನೆ ತಿಳಿಸಿದೆ.