ಕೊರೋನ ಮುನ್ನೆಚ್ಚರಿಕೆ: ಶೀಘ್ರ ಸರಕಾರದಿಂದ ಹೊಸ ಮಾರ್ಗಸೂಚಿ- ಗೃಹ ಸಚಿವ ಬೊಮ್ಮಾಯಿ

Update: 2020-03-21 18:40 GMT

ಬೆಂಗಳೂರು, ಮಾ.21: ಕೊರೋನ ವೈರಸ್ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರದಿಂದ ಕೆಲ ಮಾರ್ಗಸೂಚಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗುವುದು. ಇದಕ್ಕೂ ಮುನ್ನ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಬೇಕು. ಇದೇ ವೇಳೆ ಎಲ್ಲ ಜಿಲ್ಲಾ ವ್ಯಾಪ್ತಿ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಲಾಗುತ್ತದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News