ಎಲ್ಲ ದೇಶಿಯ ಕ್ರಿಕೆಟ್ ಟೂರ್ನಿ ಮುಂದೂಡಿದ ಶ್ರೀಲಂಕಾ ಕ್ರಿಕೆಟ್

Update: 2020-03-22 04:55 GMT

ಹೊಸದಿಲ್ಲಿ, ಮಾ.22: ಕೊರೋನ ವೈರಸ್ ಹರಡುವುದನ್ನು ತಪ್ಪಿಸಲು ಶ್ರೀಲಂಕಾ ಕ್ರಿಕೆಟ್ ತನ್ನ ಎಲ್ಲ ದೇಶೀಯ ಟೂರ್ನಮೆಂಟ್‌ಗಳನ್ನು ಮುಂದೂಡಿದೆ.

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಭಾಗವಾಗಿ ಮಾ.23ರ ತನಕ ದೇಶದಲ್ಲಿ ಕರ್ಫ್ಯೂ ಹೇರಲಾಗುವುದು ಎಂದು ಮಾ.20ರಂದು ಶ್ರೀಲಂಕಾದ ಅಧ್ಯಕ್ಷ ಗೋತಬಯಾ ರಾಜಪಕ್ಸ ಘೋಷಿಸಿದ್ದರು.

‘‘ದೇಶದ ಆರೋಗ್ಯ ಪರಿಸ್ಥಿತಿಯನ್ನು ಪರಿಗಣಿಸಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಟೂರ್ನಮೆಂಟ್ ಸಮಿತಿಯು ಎಲ್ಲ ದೇಶೀಯ ಟೂರ್ನಿಗಳನ್ನು ಮುಂದೂಡಲು ನಿರ್ಧರಿಸಿದೆ’’ ಎಂದು ಶ್ರೀಲಂಕಾ ಕ್ರಿಕೆಟ್ ಟ್ವೀಟ್ ಮಾಡಿದೆ.

ಕೊರೋನ ವೈರಸ್ ಜಾಗತಿಕ ಮಟ್ಟದಲ್ಲಿ ತೀವ್ರವಾಗಿ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಮಾ.12ರಂದು ಇಂಗ್ಲೆಂಡ್ ತಂಡ ಶ್ರೀಲಂಕಾ ಕ್ರಿಕೆಟ್ ಮಂಡಳಿಯೊಂದಿಗೆ ಚರ್ಚಿಸಿದ ಬಳಿಕ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಮುಂದೂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News