ಶಾಹಿನ್ ಬಾಗ್ ನಂತರ ಜಾಮಿಯಾ ವಿವಿ ಹೊರಗಡೆ ಪೆಟ್ರೋಲ್ ಬಾಂಬ್ ದಾಳಿ

Update: 2020-03-22 09:46 GMT

ಹೊಸದಿಲ್ಲಿ: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿ ಹೊರಗಡೆ ಅಪರಿಚಿತ ದುಷ್ಕರ್ಮಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾನೆ ಎಂದು ವರದಿಯಾಗಿದೆ.

ಡೆಲಿವರಿ ಬಾಯ್ ನ ಧಿರಿಸಿನಲ್ಲಿ ಬಂದಿದ್ದ ದುಷ್ಕರ್ಮಿ ಈ ದಾಳಿ ನಡೆಸಿದ್ದ ಎನ್ನಲಾಗಿದೆ. ದಾಳಿಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂದು ಬೆಳಗ್ಗೆ ಶಾಹಿನ್ ಬಾಗ್ ಪ್ರತಿಭಟನ ಸ್ಥಳದ ಸಮೀಪ ಪೆಟ್ರೋಲ್ ಬಾಂಬ್ ದಾಳಿ ನಡೆದಿತ್ತು. ಕೊರೊನಾವೈರಸ್ ಭೀತಿಯ ಹಿನ್ನೆಲೆಯಲ್ಲಿ ಜಾಮಿಯಾ ಸಮಿತಿಯು ಸಿಎಎ ವಿರೋಧಿ ಪ್ರತಿಭಟನೆಯನ್ನು ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News