ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ

Update: 2020-03-22 12:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.22: ನಾಳೆ(ಮಾ.23) ನಡೆಯಬೇಕಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮರು ವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ರವಿವಾರ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೊರೋನಾ ಎಲ್ಲೆಡೆ ವ್ಯಾಪಿಸುತ್ತಿರುವುದರಿಂದ ರಾಜ್ಯ ಸರಕಾರ 9 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಿಸಿದೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಅನಾನುಕೂಲವಾಗುತ್ತದೆ ಎಂಬ ಕಾರಣಕ್ಕೆ ಅನಿವಾರ್ಯವಾಗಿ ಪರೀಕ್ಷೆ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.

'ಸೋಮವಾರ ನಡೆಯಲಿರುವ ದ್ವಿತೀಯ ಪಿಯು ಅಂತಿಮ ವಿಷಯದ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬಹುದು ಎಂದು ಹೇಳಲಾಗಿತ್ತು. ಆದರೆ, ರಾಜ್ಯ ಸರಕಾರ ಕೊರೋನಾ ಸೋಂಕಿನ ವಿರುದ್ಧ ಸಮರ ಸಾರಿರುವ ಹಿನ್ನೆಲೆಯಲ್ಲಿ ನಾವು ಅದಕ್ಕೆ ಸ್ಪಂದಿಸಬೇಕಿದೆ. ಹೀಗಾಗಿ, ಪರೀಕ್ಷೆ ನಡೆಯುವುದಿಲ್ಲ. ಈ ವಿಷಯದ ಪರೀಕ್ಷೆ ಮರುವೇಳಾಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News