×
Ad

ದ.ಕ. ಜಿಲ್ಲೆಯಲ್ಲಿ ಮಾ.31ರವರೆಗೆ ಖಾಸಗಿ ಬಸ್ ಸಂಚಾರ ಸ್ಥಗಿತ

Update: 2020-03-22 19:05 IST

ಮಂಗಳೂರು, ಮಾ.22: ಕೊರೋನ ವೈರಸ್ ಮಂಗಳೂರಿಗೆ ಹಬ್ಬಿರುವ ಮತ್ತು ರಾಜ್ಯದ 9 ಜಿಲ್ಲೆಗಳಲ್ಲಿ ‘ಶಟ್‌ಡೌನ್’ ನಡೆಯಲಿರುವ ಕಾರಣ ಮಾ.31ರವರೆಗೆ ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗುವುದು ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

ಜಿಲ್ಲಾಡಳಿತ ಸೂಚನೆಯ ಮೇರೆಗೆ ಈ ಕ್ರಮ ಜರುಗಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಬಸ್ ಸಂಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News