ನಿರ್ಮಾಪಕ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆ

Update: 2020-03-23 14:42 GMT

ಬೆಂಗಳೂರು, ಮಾ.23: ಕನ್ನಡ ಸಿನಿಮಾ ರಂಗದ ನಿರ್ಮಾಪಕ, ಉದ್ಯಮಿ ಕಪಾಲಿ ಮೋಹನ್(52) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ನಗರದ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣದ ಬಳಿ ಇರುವ ಖಾಸಗಿ ಹೊಟೇಲ್‌ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.

ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಗ್ರಾಮದವರಾಗಿದ್ದ ಕಪಾಲಿ ಮೋಹನ್, ಡಾ.ರಾಜ್‌ಕುಮಾರ್ ಅವರ ಆಪ್ತರೂ ಆಗಿದ್ದರು ಎನ್ನಲಾಗಿದೆ. ಈ ಹಿಂದೆ ಜೂಜಾಟ ನಡೆಸುತ್ತಿದ್ದ ಆರೋಪದಡಿ ಮೋಹನ್ ಅವರ ಸದಾಶಿವನಗರದ ಮನೆ ಹಾಗೂ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಆರ್ಥಿಕ ಸಮಸ್ಯೆ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಘಟನೆ ಸಂಬಂಧ ಡಿಸಿಪಿ ಶಶಿಕುಮಾರ್ ಹಾಗೂ ಗಂಗಮ್ಮನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News