×
Ad

ಸುಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ: ದ.ಕ. ಜಿಲ್ಲಾಧಿಕಾರಿ

Update: 2020-03-23 20:25 IST

ಮಂಗಳೂರು, ಮಾ.23: ದ.ಕ.ಜಿಲ್ಲೆಯಲ್ಲಿ ಕೊರೋನ ವೈರಾಣು ಕಾಯಿಲೆಯ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಪ್ರತಿನಿತ್ಯ ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ಹಾಗೂ ಕೈಗೊಳ್ಳಲಾಗುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಕಟನೆಗಳನ್ನು ಹೊರಡಿಸಲಾಗುತ್ತದೆ. ಜಿಲ್ಲಾಡಳಿದಿಂದ ಅಧಿಕೃತವಾಗಿ ಹೊರಡಿಸಲಾಗುವ ಪ್ರಕಟನೆಗಳ ಹೊರತಾಗಿಯೂ ಕೆಲವು ಆತಂಕಕಾರಿ ಸುಳ್ಳು ಸುದ್ದಿಗಳನ್ನು ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಿರುವುದನ್ನು ಗಮನಿಸಲಾಗಿದೆ. ಈ ರೀತಿ ಸುಳ್ಳು ಸುದ್ದಿಗಳನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡುವುದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಸೃಷ್ಟಿಯಾಗುವುದಲ್ಲದೆ ಗೊಂದಲದ ವಾತಾವರಣ ಉಂಟಾಗುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಸುದ್ದಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News