ಜಮ್ಮು ಕಾಶ್ಮೀರದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಬಿಡುಗಡೆಗೆ ಆದೇಶ

Update: 2020-03-24 06:46 GMT

ಶ್ರೀನಗರ, ಮಾ.24: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಏಳು ತಿಂಗಳ ನಂತರ ಬಂಧನದಿಂದ ಮುಕ್ತಗೊಳಿಸುವಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತ ಆದೇಶಿಸಿದೆ. ಎರಡು ವಾರಗಳ ಹಿಂದೆ ಅವರ ತಂದೆ ಫಾರೂಕ್ ಅಬ್ದುಲ್ಲಾ ಕೂಡಾ ಬಂಧನದಿಂದ ಬಿಡುಗಡೆಯಾಗಿದ್ದರು.

ಆಗಸ್ಟ್ 5 ರಿಂದ ಬಂಧನಕ್ಕೊಳಗಾಗಿದ್ದ ಒಮರ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದೇಶ ಹೊರಡಿಸಿದ್ದು, ಕೇಂದ್ರವು 370 ನೇ ವಿಧಿಯನ್ನು ರದ್ದುಪಡಿಸಿ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ನಿರ್ಧಾರದ ಬೆನ್ನಲ್ಲೇ ಒಮರ್ ಅಬ್ದುಲ್ಲಾರನ್ನು ವಶಕ್ಕೆ ಪಡೆಯಲಾಗಿತ್ತು.

ಒಮರ್ ಅಬ್ದುಲ್ಲಾ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಮರ್ ಅಬ್ದುಲ್ಲಾ ವಿರುದ್ಧ ಪಿಎಸ್ಎ ಸಹ ರದ್ದುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ವರ್ಷ ಹಿಂದಿನ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವುದಾಗಿ ಸರ್ಕಾರ ಘೋಷಿಸಿದಾಗಿನಿಂದ ಒಮರ್ ಅಬ್ದುಲ್ಲಾ ಬಂಧನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News