ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣ: ಆರೋಪಿಗೆ ಹೈಕೋರ್ಟ್ ಜಾಮೀನು

Update: 2020-03-24 17:25 GMT

ಬೆಂಗಳೂರು, ಮಾ.24: ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಹಮ್ಮದ್ ಮುಝಮ್ಮಿಲ್‍ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಜಾಮೀನು ಕೋರಿ ಆರೋಪಿ ಮುಹಮ್ಮದ್ ಮುಝಮ್ಮಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.

ಕಳೆದ ವರ್ಷ ನ.18ರ ರಾತ್ರಿ ಸಮಯದಲ್ಲಿ ಮೈಸೂರಿನ ಬನ್ನಿಮಂಟಪದಲ್ಲಿ ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ನಡೆದಿತ್ತು. ತನ್ವೀರ್ ಸೇಠ್ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾಗ ಈ ಘಟನೆ ನಡೆದಿತ್ತು. ಅವರ ಕುತ್ತಿಗೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ತನ್ವೀರ್ ಸೇಠ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಕಳುಹಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೆ ಸಂಪೂರ್ಣ ಚಿಕಿತ್ಸೆ ಪಡೆದು ಭಾರತಕ್ಕೆ ಮರಳಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಮೈಸೂರು ಠಾಣಾ ಪೊಲೀಸರು ಆರೋಪಿ ಮುಹಮ್ಮದ್ ಮುಝಮ್ಮಿಲ್ ರನ್ನು ಬಂಧಿಸಿದ್ದರು. ಮಂಗಳವಾರ ಆರೋಪಿಗೆ ಜಾಮೀನು ಮಂಜೂರಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News