ಮಾ.26ರಿಂದ ಸೆಂಟ್ರಲ್ ಮಾರ್ಕೆಟ್ ನಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಮಾತ್ರ ಖರೀದಿಗೆ ಅವಕಾಶ

Update: 2020-03-25 17:57 GMT

ಮಂಗಳೂರು : ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಬುಧವಾರ ಸಂಜೆ ಸಂಸದರು, ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

ಮಾ.26ರಿಂದ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ನಗರದ ಸೆಂಟ್ರಲ್ ಮಾರ್ಕೆಟ್ ನಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಮಾತ್ರ ದಿನಸಿ ವಸ್ತುಗಳ ಖರೀದಿಗೆ ಅವಕಾಶ. ಯಾವುದೇ ಕಾರಣಕ್ಕೂ ಸಾರ್ವಜನಿಕರು ವಸ್ತುಗಳನ್ನು ಖರೀದಿಸುವಂತಿಲ್ಲ.

ಉಳಿದಂತೆ ದಿನಸಿ ಅಂಗಡಿಗಳಲ್ಲಿ ಬೆಳಗ್ಗೆ 6 ರಿಂದ 12 ತನಕ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.

ಪ್ರಧಾನಿ ಮೋದಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದನ್ನು ಯಶಸ್ವಿಗೊಳಿಸಿ ಕೊರೋನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಸಚಿವರು ಈ ಸಂದರ್ಭ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News