ಕೊರೋನ ಸೋಂಕಿತ ಗೌರಿಬಿದನೂರಿನ ಮಹಿಳೆ ಮೃತ್ಯು

Update: 2020-03-25 17:57 GMT
ಸಾಂದರ್ಭಿಕ ಚಿತ್ರ

ಬೆಂಗಳೂರು. ಮಾ.25: ಕೊರೋನ ಸೋಂಕಿತ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 75 ವರ್ಷದ ಮಹಿಳೆಯೊಬ್ಬರು ಬೆಂಗಳೂರು ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಮಧುಮೇಹ, ಎದೆನೋವು ಹಾಗೂ ಉಸಿರಾಟದದ ತೊಂದರೆಯಿಂದ ಬಳಲುತ್ತಿದ್ದ ಇವರ ಸಾವಿನ ನಿಖರ ಕಾರಣ ದೃಢಪಟ್ಟಿಲ್ಲ.

ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದು, "ಗೌರಿಬಿದನೂರಿನ 75 ವರ್ಷದ ಕೋವಿಡ್ 19 ಸೋಂಕಿತ ವ್ಯಕ್ತಿಯೊಬ್ಬರು ರಾತ್ರಿ ಒಂದು ಗಂಟೆಗೆ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಇವರು ಮಧುಮೇಹ, ಎದೆನೋವು ಹಾಗೂ ಸೊಂಟ ನೋವಿನಿಂದ ಬಳಲುತ್ತಿದ್ದರು. ಮರಣದ ಕಾರಣ ಏನೆಂದು ಪರೀಕ್ಷಾ ವರದಿಗಳು ಬಂದ ನಂತರವೇ ಖಚಿತವಾಗಲಿದೆ' ಎಂದು ತಿಳಿಸಿದ್ದಾರೆ.

'ಇವರು ಗೌರಿಬಿದನೂರಿನ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ನಿನ್ನೆ ಅವರನ್ನು ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು' ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News