ಕಾಸರಗೋಡು : ಲಾಕ್ ಡೌನ್ ಆದೇಶ ಉಲ್ಲಂಘನೆ; 44 ಪ್ರಕರಣ ದಾಖಲು

Update: 2020-03-26 07:10 GMT
ಸಾಂದರ್ಭಿಕ ಚಿತ್ರ

ಕಾಸರಗೋಡು : ಲಾಕ್ ಡೌನ್ ಆದೇಶ ಉಲ್ಲಂಘಿಸಿದ  ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ  44   ಪ್ರಕರಣಗಳನ್ನು ದಾಖಲಿಸಲಾಗಿದೆ.

ಕಾಸರಗೋಡು,  ಮಂಜೇಶ್ವರ, ಕುಂಬಳೆ,   ಬದಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಕೇರಳದಲ್ಲಿ  ಇದುವರೆಗೆ 118  ಕೊರೋನ ಸೋಂಕಿತರನ್ನು ಪತ್ತೆಹಚ್ಚಲಾಗಿದ್ದು, ಈ ಪೈಕಿ 112 ಮಂದಿ ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.  

ಕಾಸರಗೋಡು ಜಿಲ್ಲೆಯಲ್ಲಿ  41 ಮಂದಿ ಚಿಕಿತ್ಸೆಯಲ್ಲಿದ್ದು, ಮೂವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News