ಎಪ್ರಿಲ್ 20ರ ಬಳಿಕ ಎಸೆಸೆಲ್ಸಿ ಪರೀಕ್ಷೆ ದಿನಾಂಕದ ಬಗ್ಗೆ ನಿರ್ಧಾರ: ಶಿಕ್ಷಣ ಇಲಾಖೆ

Update: 2020-03-26 13:27 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ,26: ಕೊರೋನ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಗಳನ್ನು ಮಾ.31 ರ ಬಳಿಕ ನಡೆಸುವ ಸಂಬಂಧ ಶಿಕ್ಷಣ ಇಲಾಖೆ ಚಿಂತನೆ ನಡೆಸಿತ್ತು. ಆದರೆ, ಕೇಂದ್ರ ಸರಕಾರ ಎ.14 ರವರೆಗೂ ಲಾಕ್‍ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗಳನ್ನು ಎ.20 ರವರೆಗೂ ಮುಂದೂಡಿಕೆ ಮಾಡಿ ಪ್ರೌಢಶಿಕ್ಷಣಾ ಪರೀಕ್ಷಾ ಮಂಡಳಿ ಆದೇಶಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆಯು ಕೋವಿಡ್ 19 ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಮಾ.27 ರಿಂದ ನಡೆಯಬೇಕಿದ್ದ ಎಸೆಸೆಲ್ಸಿ ಪರೀಕ್ಷೆಗಳನ್ನು ಮಾ.31ರ ಬಳಿಕ ನಡೆಸಲು ಉದ್ದೇಶಿಸಿದ್ದರು. ಆದರೆ, ಕೇಂದ್ರದಿಂದ ಎ.14 ರವರೆಗೂ ಲಾಕ್‍ಡೌನ್ ಘೋಷಣೆಯಾಗಿದೆ. ಹೀಗಾಗಿ, ಎಪ್ರಿಲ್ 14 ರ ಬಳಿಕ ನಡೆಸಲು ಇಲಾಖೆ ಮುಂದಾಗಿದೆ.

ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಕಡಿಮೆಯಾದ ಬಳಿಕ ಎ.20ರ ನಂತರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಅದನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ವಾಟ್ಸಾಪ್, ಈಮೇಲ್, ಎಸ್‍ಎಂಎಸ್ ಹಾಗೂ ಮಾಧ್ಯಮಗಳ ಮೂಲಕ ತಿಳಿಯಪಡಿಸಲಾಗುತ್ತದೆ. ಹೀಗಾಗಿ, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News