ಫ್ರಾನ್ಸ್ ನಿಂದ ಬಂದಿದ್ದ ವ್ಯಕ್ತಿಗೆ ಕೊರೋನ ದೃಢ: ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

Update: 2020-03-26 12:58 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.26: ಫ್ರಾನ್ಸ್ ದೇಶದಿಂದ ಭಾರತಕ್ಕೆ ಪ್ರವಾಸಕ್ಕೆ ಆಗಮಿಸಿದ್ದ ವ್ಯಕ್ತಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು ಆತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

65 ವರ್ಷ ಪ್ರಾಯದ ಫ್ರಾನ್ಸ್ ಪ್ರಜೆ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ. ಅಲ್ಲಿಂದ ಆತ ಆಂಧ್ರಪ್ರದೇಶದ ಪುಟಪರ್ತಿಗೆ ತೆರಳಿದ್ದ. ಪುಟಪರ್ತಿಯಲ್ಲಿ ಆತನಿಗೆ ರೂಮ್ ನೀಡಲು ನಿರಾಕರಿಸಿದ ಕಾರಣ ಫ್ರಾನ್ಸ್ ಪ್ರಜೆ ಮಾ.21ರಂದು ಬೆಂಗಳೂರಿಗೆ ಆಗಮಿಸಿದ್ದ.

ಆತನಲ್ಲಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ರಕ್ತ ಮತ್ತು ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿ ಮಾ.26ರಂದು ಬಂದಿದ್ದು, ಆತನಲ್ಲಿ ಕೊರೋನ ವೈರಸ್ ಸೋಂಕು ಇರುವುದು ದೃಢವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News