×
Ad

ಮಾಸ್ಕ್, ಸ್ಯಾನಿಟೈಸರ್ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ: ಕಲಬುರಗಿ ಜಿಲ್ಲಾಧಿಕಾರಿ ಶರತ್ ಎಚ್ಚರಿಕೆ

Update: 2020-03-26 18:55 IST

ಕಲಬುರಗಿ, ಮಾ.26: ಜನರ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು ಮೆಡಿಕಲ್ ಶಾಪ್‍ಗಳು ಮಾಸ್ಕ್ ಹಾಗೂ ಸ್ಯಾನಿಟೈಸರನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಶರತ್ ಆದೇಶಿಸಿದ್ದಾರೆ.

ಕೊರೋನ ಸೋಂಕಿನಿಂದ ಪಾರಾಗಲು ಜನತೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೇಂದ್ರ ಸರಕಾರ ನಿಗದಿಪಡಿಸಿರುವ 2ಪ್ಲೇ ಮಾಸ್ಕ್ ಗೆ 8ರೂ, 3ಪ್ಲೇ ಮಾಸ್ಕ್ ಗೆ 10ರೂ. ಹಾಗೂ 200ಎಂಎಲ್ ಸ್ಯಾನಿಟೈಸರ್ ಗೆ 100ರೂ. ಇದೆ. ಇದಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸರಕಾರ ಸೂಚಿಸುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಪಾಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News