ಉಡುಪಿ: ಶಂಕಿತ ಕೊರೋನ ಸೋಂಕಿಗೆ ಇಂದು 16 ಮಂದಿ ದಾಖಲು

Update: 2020-03-26 14:47 GMT
ಸಾಂದರ್ಭಿಕ ಚಿತ್ರ

ಉಡುಪಿ, ಮಾ.26: ಜಿಲ್ಲೆಯಲ್ಲಿ ಗುರುವಾರ ಒಟ್ಟು 16 ಮಂದಿ ಶಂಕಿತ ನೋವೆಲ್ ಕೊರೋನ ವೈರಸ್ (ಕೋವಿಡ್-19) ಸೋಂಕಿನ ಪರೀಕ್ಷೆಗಾಗಿ ಹೊಸದಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ.

ಬುಧವಾರ ಉಡುಪಿ ಜಿಲ್ಲೆಯ ಮೊದಲ ಕೊರೋನ ಸೋಂಕು ಪತ್ತೆಯಾದ ಮಣಿಪಾಲದ 34ರ ಹರೆಯದ ಯುವಕನನ್ನು ಇದೀಗ ಮುಂದಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿಗೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಇಂದಿನ 16 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 103 ಮಂದಿ ಶಂಕಿತ ಕೊರೋನ ಸೋಂಕಿಗಾಗಿ ಪರೀಕ್ಷೆಗೊಳಗಾಗಿದ್ದು, ಇವರಲ್ಲಿ 79 ಮಂದಿಯಲ್ಲಿ ಯಾವುದೇ ಸೋಂಕು ಪತ್ತೆಯಾಗಿರಲಿಲ್ಲ. ಇನ್ನು 23 ಮಂದಿಯ ಪರೀಕ್ಷಾ ವರದಿ ಬರಬೇಕಿದೆ. ಇಂದು 16 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1406 ಮಂದಿ ತಪಾಸಣೆ ಗೊಳಗಾಗಿದ್ದು, ಇವರಲ್ಲಿ 336 ಮಂದಿ ಇನ್ನು ಹೋಮ್ ಕ್ವಾರಂಟೇನ್ ನಲ್ಲಿದ್ದಾರೆ. ಬುಧವಾರದಂದು 11 ಮಂದಿ ಶಂಕಿತರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News