ದ.ಕ.ಜಿಲ್ಲೆಯ ಪತ್ರಕರ್ತರಿಗೆ ಪತ್ರಿಕಾಭವನ ಟ್ರಸ್ಟ್ ನೆರವು
ಮಂಗಳೂರು, ಮಾ.26: ಕೊರೋನ ಹಾವಳಿಯ ಮಧ್ಯೆಯೂ ಸಾಮಾಜಿಕ ಕಳಕಳಿಯಿಂದ ಕೆಲಸ ನಿರ್ವಹಿಸುವ ಪತ್ರಕರ್ತರಿಗೆ ನೆರವಾಗುವ ದೃಷ್ಟಿಯಿಂದ ಪತ್ರಿಕಾ ಭವನ ಟ್ರಸ್ಟ್‌ನಿಂದ ಪ್ರೆಸ್‌ಕ್ಲಬ್ ಮತ್ತು ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಗುರುವಾರ ಪ್ರೆಸ್‌ಕ್ಲಬ್‌ನಲ್ಲಿ ಉಚಿತ ಅಕ್ಕಿ, ಗೋಧಿ ಹಾಗೂ ಮಾಸ್ಕ್ ವಿತರಿಸಲಾಯಿತು.
ಸಂಘದ 280 ಸದಸ್ಯರಿಗೆ ತಲಾ 25 ಕೆ.ಜಿ. ಅಕ್ಕಿ, 5 ಕೆ.ಜಿ. ಗೋಧಿ, ಮಾಸ್ಕ್‌ನ್ನು ಸ್ವೀಕರಿಸಿದರು.
ಈ ಸಂದರ್ಭ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ್ ಶೆಟ್ಟಿ ಮಾತನಾಡಿ ಪತ್ರಕರ್ತರು ಸದಾ ಚಟುವಟಿಕೆ ಮತ್ತು ಕ್ರಿಯಾಶೀಲರಾಗಿರುವವರು. ಯಾವುದೇ ದುರ್ಘಟನೆ, ಸಮಾಜಘಾತುಕ ಘಟನೆ, ಸಾಂಕ್ರಾಮಿಕ ರೋಗಗಳು ಬಂದಾಗ ಪತ್ರಕರ್ತರೇ ನಿರಂತರ ಸುದ್ದಿಯ ಬೆನ್ನು ಬೀಳುವವರು. ಕೊರೋನ ಎಲ್ಲೆಡೆ ಪಸರಿಸುವ ಪ್ರಸ್ತುತ ಕಾಲಘಟ್ಟದಲ್ಲಿ ಕರ್ತವ್ಯವನ್ನೇ ಧ್ಯೇಯವಾಗಿಸಿಕೊಂಡು ದುಡಿಯುವ ಪತ್ರಕರ್ತರಿಗೆ ಮನೆಯ ಬಗ್ಗೆಯೂ ಚಿಂತೆಯಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಅಕ್ಕಿ, ಗೋಧಿ, ಮಾಸ್ಕ್ ವಿತರಿಸುವ ಮೂಲಕ ಟ್ರಸ್ಟ್ ನೆರವಾಗುತ್ತಿದೆ ಎಂದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಮಾತನಾಡಿದರು.