ಕೊಡಗು: 353 ಮಂದಿಗೆ ಮನೆಗಳಲ್ಲಿಯೇ ಸಂಪರ್ಕ ತಡೆ; ಮೂವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

Update: 2020-03-26 18:09 GMT

ಮಡಿಕೇರಿ, ಮಾ.26: ಕೋವಿಡ್-19 ರ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆಹಚ್ಟಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಅದರಂತೆ ಮಡಿಕೇರಿ ತಾಲೂಕಿನಲ್ಲಿ 139, ವಿರಾಜಪೇಟೆ ತಾಲೂಕಿನಲ್ಲಿ 114 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 109 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 353 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ.

ಇಲ್ಲಿಯವರೆಗೆ ಒಟ್ಟು 34 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢಪಟ್ಟಿದ್ದು, 10 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 23 ಪ್ರಕರಣಗಳಲ್ಲಿ ವರದಿ ನಿರೀಕ್ಷಿಸಲಾಗಿದೆ. ಮೂವರು ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News