'ಲಾಕ್ ಡೌನ್' ವೇಳೆ ಪೊಲೀಸ್ ಲಾಠಿಚಾರ್ಜ್ ಪ್ರಶ್ನಿಸಿ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಕೆ
Update: 2020-03-27 18:04 IST
ಬೆಂಗಳೂರು, ಮಾ.27: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಪೊಲೀಸರು ಅನಗತ್ಯವಾಗಿ ಜನರ ಮೇಲೆ ಲಾಠಿ ಚಾರ್ಜ್ ಮಾಡಲಾಗುತ್ತಿದೆ ಎಂದು ಆರೋಪಿಸಿ ವಕೀಲರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಕುರಿತು ವಕೀಲ ಎನ್.ಪಿ.ಅಮೃತೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಪೊಲೀಸರು ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದಿನಬಳಕೆ ವಸ್ತುಗಳನ್ನು ತರಲು ಹೋದ ಜನರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ಲಾಠಿ ಚಾರ್ಜ್ ನಿಲ್ಲಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.