ತನ್ನ ಮೂವರು ಮಕ್ಕಳನ್ನು ಮರೆಯಾಗಿ ನಿಲ್ಲಿಸಿ ಬೀದಿ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ

Update: 2020-03-27 14:52 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.27: ಗರ್ಭಿಣಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ಸುತ್ತ ಮರೆಯಾಗಿ ನಿಲ್ಲಿಸಿಕೊಂಡು ಬೀದಿ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಇಲ್ಲಿನ ಬ್ಯಾಡರಹಳ್ಳಿ ಸಮೀಪ ನಡೆದಿದೆ ಎಂದು ವರದಿಯಾಗಿದೆ.

ರಾಯಚೂರು ನಿವಾಸಿಯಾಗಿರುವ ಲಕ್ಷ್ಮೀ ಎಂಬಾಕೆ ಮಗುವಿಗೆ ಜನ್ಮ ನೀಡಿದ್ದು, ಹೆರಿಗೆ ಮಾಡಿಕೊಂಡ ನಂತರ ಸ್ಥಳಕ್ಕೆ ಆ್ಯಂಬುಲೆನ್ಸ್ ಮೂಲಕ ಆರೋಗ್ಯ ಸಿಬ್ಬಂದಿ ತೆರಳಿ, ಉಪಚರಿಸಿ ವಾಣಿವಿಲಾಸ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಆದರೆ, ಕೊರೋನ ಸೋಂಕಿತರು ಇರುವ ಉದ್ದೇಶದಿಂದ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿಲ್ಲ. ಹಾಗಾಗಿ ಮೂವರು ಹೆಣ್ಣುಮಕ್ಕಳು ಮತ್ತು ಹಸುಗೂಸಿನೊಂದಿಗಿದ್ದ ಲಕ್ಷ್ಮೀಯನ್ನು ಬ್ಯಾಡರಹಳ್ಳಿ ಪೊಲೀಸರು ಸೂಕ್ತ ಚಿಕಿತ್ಸೆ ಕೊಡಿಸಿ, ಠಾಣೆಯಲ್ಲಿಯೇ ಆಶ್ರಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮೂಲತಃ ರಾಯಚೂರಿನವರಾಗಿದ್ದ ಈಕೆ, ನಗರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ತನ್ನ ಪತಿ ಲಕ್ಷೀಯನ್ನು ಬಿಟ್ಟು ಪರಾರಿಯಾಗಿದ್ದ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News