ಎ.10ರೊಳಗೆ ಪಡಿತರ ವಿತರಿಸಬೇಕು: ಆಹಾರ ಸಚಿವ ಗೋಪಾಲಯ್ಯ

Update: 2020-03-27 17:01 GMT

ಬೆಂಗಳೂರು, ಮಾ.27: ರಾಜ್ಯದ ಜನತೆಗೆ ಎ.30ರೊಳಗೆ ಪಡಿತರವನ್ನು ವಿತರಿಸಿ ಮುಗಿಸಬೇಕು. ನಂತರ ಕೇಂದ್ರ ಸರಕಾರ ಕೊಡುವ ಅಕ್ಕಿ, ಬೇಳೆಯನ್ನು ವಿತರಿಸುವ ಕಾರ್ಯಕ್ರಮ ಇರುತ್ತದೆ ಎಂದು ಆಹಾರ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಕೇಂದ್ರ ಸರಕಾರ ಘೋಷಿಸಿರುವ ಪಡಿತರ ಪ್ಯಾಕೇಜ್ ಹಾಗೂ ರಾಜ್ಯ ಸರಕಾರದ ಎರಡು ತಿಂಗಳ ಮುಂಗಡ ಪಡಿತರ ವಿತರಣೆಯ ಬಗ್ಗೆ ರಾಜ್ಯದ ಎಲ್ಲ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಜನತೆ ಆಹಾರ ಧಾನ್ಯಗಳನ್ನು ವಿತರಿಸಲು ಆಹಾರ ಇಲಾಖೆ ಸನ್ನದ್ದವಾಗಿದ್ದು, ನಿಗದಿತ ವೇಳೆಯಲ್ಲಿ ಜನತೆಗೆ ಪಡಿತರ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಎರಡು ತಿಂಗಳ ಹೆಚ್ಚುವರಿ ಪಡಿತರವನ್ನು ಹತ್ತಿರದ ಶಾಲಾ ಕಾಲೇಜುಗಳಲ್ಲಿ ಸಂಗ್ರಹಿಸಿಕೊಟ್ಟುಕೊಂಡು ಎಲ್ಲ ಹಳ್ಳಿಗಳಿಗೂ ಎ.10ರೊಳಗೆ ವಿತರಣೆ ಮಾಡಬೇಕು. ಇದಕ್ಕೆ ಕಾನೂನು ಮಾಪನ ಇಲಾಖೆ, ರೇಷ್ಮೆ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರವನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News