ಕೊರೋನ ಸೋಂಕಿತರಿಗೆ ಪರಿಹಾರ ಒದಗಿಸಲು ಕೋರಿ ಹೈಕೋರ್ಟ್‍ಗೆ ಪಿಐಎಲ್

Update: 2020-03-27 17:36 GMT

ಬೆಂಗಳೂರು, ಮಾ.27: ಕೊರೋನ ವೈರಸ್ ಸೋಂಕಿತರಿಗೆ ಹಾಗೂ ಕೊರೋನದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಒದಗಿಸಲು ನಿರ್ದೇಶಿಸಲು ಕೋರಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನಗರದ ವಕೀಲೆ ಗೀತಾ ಮಿಶ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ರಾಜ್ಯದಲ್ಲಿ ಕೊರೋನ ವೈರಸ್‍ಗೆ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ. 55 ಜನರು ಕೊರೋನ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎಲ್ಲರಿಗೂ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೊರೋನ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ವೈದ್ಯರ ಕೊರತೆ, ವೈದ್ಯಕೀಯ ಉಪಕರಣಗಳ ಕೊರತೆ ಇದೆ. ಈ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸೂಚಿಸಬೇಕು. ಹಾಗೂ ಕಟ್ಟಡ ಕಾರ್ಮಿಕರಿಗೆ ಮನೆಗಳನ್ನು ಒದಗಿಸಿಕೊಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News