ಎಲ್ಲಾ ದೇಶೀಯ ವಿಮಾನಗಳ ಹಾರಾಟ ನಿಷೇಧ ಎ.14ರ ತನಕ ವಿಸ್ತರಣೆ

Update: 2020-03-27 17:46 GMT

ಹೊಸದಿಲ್ಲಿ, ಮಾ.27: ಕೋವಿಡ್ -19 ವಿರುದ್ಧ ಹೋರಾಟವನ್ನು ದೇಶಾದ್ಯಂತ ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಭಾರತದಾದ್ಯಂತ ದೇಶೀಯ ವಿಮಾನಗಳ ಹಾರಾಟ ನಿಷೇಧವನ್ನು ಮಾರ್ಚ್ 31 ರಿಂದ ಎಪ್ರಿಲ್ 14ರವರೆಗೆ ವಿಸ್ತರಿಸಲಾಗಿದೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ.

ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ಪ್ರಕಟಿಸುವ ಮೊದಲು ಭಾರತದಲ್ಲಿ ಮತ್ತು ಹೊರಗಿನ ಅಂತರ್‌ರಾಷ್ಟ್ರೀಯ ವಿಮಾನಯಾನಗಳನ್ನು ಈಗಾಗಲೇ ಎಪ್ರಿಲ್ 15 ರವರೆಗೆ ಸ್ಥಗಿತಗೊಳಿಸಲಾಗಿತ್ತು.

ರೈಲ್ವೆ ಈಗಾಗಲೇ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಮತ್ತು ದಿನಸಿ ಮತ್ತು ವೈದ್ಯಕೀಯ ಸಾಮಗ್ರಿಗಳಂತಹ ಅಗತ್ಯ ಸೇವೆಗಳನ್ನು ಒದಗಿಸುವ ವಿಮಾನಗಳು ಕಾರ್ಯಾಚರಿಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News