''ಹೊರಗಡೆ ಬಂದು ಸೀನಿ, ವೈರಸ್ ಹರಡಿ'' ಎಂದ ಆರೋಪ: ಟೆಕ್ಕಿಯ ಬಂಧನ

Update: 2020-03-28 05:22 GMT
ಆರೋಪಿ ಮಾಡಿದ್ದನೆನ್ನಲಾದ ಫೇಸ್ ಬುಕ್ ಪೋಸ್ಟ್

ಬೆಂಗಳೂರು, ಮಾ.28: ''ಹೊರಗಡೆ ಬಂದು ಸೀನಿ, ವೈರಸ್ ಹರಡಿ'' ಎಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ ಆರೋಪಕ್ಕೆ ಸಂಬಂಧಿಸಿ ಇನ್ಫೋಸಿಸ್‌ನ ಟೆಕ್ಕಿಯೋರ್ವನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಇನ್ಫೊಸಿಸ್ ಕಂಪೆನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಮಹದೇವಪುರ ಸಮೀಪದ ಎ.ನಾರಾಯಣಪುರ ನಿವಾಸಿ ಮುಜೀಬ್ ಮುಹಮ್ಮದ್(34) ಬಂಧಿತ ಆರೋಪಿ.

ಕೊರೋನ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಇದರ ತಡೆಗೆ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಆರೋಪಿ ಜನರನ್ನು ಪ್ರಚೋದಿಸುವ ರೀತಿಯಲ್ಲಿ ‘Spread the word to end the word’ ಎಂಬ ಪೋಸ್ಟ್ ಅನ್ನು ತನ್ನ ಫೋಟೊ ಸಮೇತ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ದೂರಲಾಗಿದೆ. ಈ ಕುರಿತಂತೆ ಸಾರ್ವಜನಿಕರೊಬ್ಬರು ನೀಡಿರುವ ಮಾಹಿತಿಯನ್ನಾಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಇನ್ಫೋಸಿಸ್ ಕಂಪೆನಿ ಸೂಚಿಸಿದೆ. ಮುಜೀಬ್ ಸಹ ಅದೇ ರೀತಿಯಲ್ಲೇ ಮನೆಯಿಂದ ಕೆಲಸ ಮಾಡುತ್ತಿದ್ದು, ಇದೇ ಸಂದರ್ಭದಲ್ಲೇ ಪೋಸ್ಟ್ ಅಪ್‌ಲೋಡ್ ಮಾಡಿದ್ದಾನೆ ಈ ನಿಟ್ಟಿನಲ್ಲಿ ತನಿಖೆ ಮುಂದುವರಿಸಿರುವುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News