ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ "ಮರಣ ಮೃದಂಗ" ಬಾರಿಸುವ ಕಾಲ ದೂರವಿಲ್ಲ: ಎಚ್ ಡಿಕೆ

Update: 2020-03-28 06:25 GMT

ಬೆಂಗಳೂರು, ಮಾ.28: ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸರಕಾರ  ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು.ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು.ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಬೇಕು ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ "ಮರಣ ಮೃದಂಗ" ಬಾರಿಸುವ ಕಾಲ ದೂರವಿಲ್ಲ ಎಂದು ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ  ಹೇಳಿದ್ದಾರೆ.

ಕೊರೋನ ವೈರಸ್‌ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ   ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಟ್ವೀಟ್ ಮಾಡಿದ್ದಾರೆ. 
ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ.ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ.ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ.ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಮಾಸ್ಕ್ , 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್‌ ಮಾಸ್ಕ್‌ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ? ಎಂದು ಸರಣಿ  ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News