ಚಿಕ್ಕಬಳ್ಳಾಪುರ ಜಿಲ್ಲೆಗೆ 2 ದಿನಗಳಲ್ಲಿ 10 ವೆಂಟಿಲೇಟರ್ ವ್ಯವಸ್ಥೆಗೆ ಡಿಸಿಎಂ ಡಾ.ಅಶ್ವತ್ಥನಾರಾಯಣ ಸೂಚನೆ

Update: 2020-03-28 06:16 GMT

ಬೆಂಗಳೂರು, ಮಾ.28: ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು  ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲಾಧಿಕಾರಿಗಳ ಜತೆ ಶನಿವಾರ ವೀಡಿಯೋ ಸಂವಾದ ನಡೆಸಿ, ಕೋವಿಡ್ -19 ಸಂಬಂಧಿಸಿದ ಬೆಳವಣಿಗೆಗಳ ಕುರಿತು ಪರಿಶೀಲಿಸಿದರು.

ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿರುವ ಅಶ್ವತ್ಥನಾರಾಯಣ ಅವರು N-95  ಮಾಸ್ಕ್, ತ್ರೀ ಲೇಯರ್ ಮಾಸ್ಕ್, ವೈದ್ಯರ ರಕ್ಷಣಾ ಕಿಟ್‌ಗಳನ್ನು ತಕ್ಷಣ ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

 ಎರಡು ದಿನಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ 10 ವೆಂಟಿಲೇಟರ್ ಗಳನ್ನು  ಸರಬರಾಜು ಮಾಡಲು ಸೂಚಿಸಿದ್ದಾರೆ.

ಸಾಮಾಜಿಕ ಅಂತರ ಮತ್ತು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಕ್ರ‌ಮಗಳ ಬಗ್ಗೆಯೂ ಮಾಹಿತಿ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News