ನಿರ್ಬಂಧ ಉಲ್ಲಂಘಿಸಿ ಸಂಚಾರ ಆರೋಪ: 150 ಬೈಕ್ ಜಪ್ತಿ

Update: 2020-03-28 11:45 GMT

ಬೆಂಗಳೂರು, ಮಾ. 28: ಕೊರೋನ ಸೋಂಕು ಹರಡುವುದನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಲಾಕ್‍ಡೌನ್ ನಿರ್ಲಕ್ಷಿಸಿ, ಸಂಚರಿಸುತ್ತಿದ್ದ 150ಕ್ಕೂ ಹೆಚ್ಚು ಬೈಕ್‍ಗಳನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.

ಕಾಟನ್ ಪೇಟೆಯ ವಿವಿಧ ಬಡಾವಣೆಗಳಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿ ಚಲಾಯಿಸುತ್ತಿದ್ದ ಬೈಕ್ ಸವಾರರನ್ನು ತಡೆದು ತಪಾಸಣೆ ನಡೆಸಿದರು. ತಪಾಸಣೆಯಲ್ಲಿ ಪಾಸ್ ಇಲ್ಲದೆ ಅನಗತ್ಯವಾಗಿ ಸಂಚರಿಸುವುದು ಕಂಡು ಬಂದಿದ್ದರಿಂದ 150ಕ್ಕೂ ಹೆಚ್ಚು ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆ ಮುಂದುವರೆದಿದ್ದು, ಅನಗತ್ಯವಾಗಿ ಬೈಕ್‍ನಲ್ಲಿ ಚಲಾಯಿಸುವವರನ್ನು ಪತ್ತೆ ಹಚ್ಚಿ ಬೈಕ್‍ಗಳನ್ನು ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

ಅದೇ ರೀತಿ, ಇಲ್ಲಿನ ಕೆಆರ್ ಮಾರುಕಟ್ಟೆ ಸಂಚಾರ ಪೊಲೀಸರು ಕೂಡ ಅನಗತ್ಯವಾಗಿ ಸಂಚರಿಸುವವರ ಬೈಕ್‍ಗಳ ಮೇಲೆ ನಿಗಾ ವಹಿಸಿದ್ದು, ಬೈಕ್ ಹಾಗೂ ಇನ್ನಿತರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನಗತ್ಯವಾಗಿ ಬೈಕ್, ವಾಹನ ಚಲಾಯಿಸುವವರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News