ರವಿವಾರವೂ ದ.ಕ. ಜಿಲ್ಲೆ ಸಂಪೂರ್ಣ ಬಂದ್ : ಸಚಿವ ಕೋಟ

Update: 2020-03-28 13:28 GMT

ಮಂಗಳೂರು : ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ರವಿವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ತುರ್ತು ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್ ಬಂಕ್‌, ಅಡುಗೆ ಅನಿಲ ವಿತರಣೆ ಗೆ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ಸುಮಾರು 400 ವರ್ತಕರ ಸಭೆ ಕರೆದು ಮನೆ ಮನೆಗೆ ಆಹಾರ ಸಾಮಗ್ರಿ ಪೂರೈಕೆ ಮಾಡುವ ಬಗ್ಗೆ ಚರ್ಚೆ ಮಾಡಲಾಗುವುದು. ಆನ್‌ಲೈನ್ ಮೂಲಕ ಆರ್ಡರ್ ಪಡೆಯಲಾಗುವುದು. ಆನ್ ಲೈನ್ ಸಂಪರ್ಕಿಸಲು ಸಾಧ್ಯವಿಲ್ಲದವರು 1077ಕ್ಕೆ ಕರೆ ಮಾಡಬಹುದು ಮತ್ತು ವಲಸೆ ಕಾರ್ಮಿಕರಿಗೆ ಧಾರ್ಮಿಕ ದತ್ರಿ ಇಲಾಖೆಯ ಮೂಲಕ ಆಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News