ಕೊರೋನ ಪಾಸಿಟಿವ್ : ಬಸ್ ಪ್ರಯಾಣಿಕರು ತಪಾಸಣೆಗೆ ಒಳಗಾಗುವಂತೆ ಕೆಎಸ್ಸಾರ್ಟಿಸಿ ಸೂಚನೆ

Update: 2020-03-28 14:00 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ. 28: ಕೊರೋನ ಸೋಂಕಿತರು ಪ್ರಯಾಣಿಸಿದ್ದ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರು ಕೂಡಲೇ ತಪಾಸಣೆಗೆ ಒಳಗಾಗುವಂತೆ ಕೆಎಸ್ಸಾರ್ಟಿಸಿ ಸೂಚಿಸಿದ್ದು, ಈ ಕುರಿತು ಸುತ್ತೋಲೆ ಹೊರಡಿಸಿದೆ.

ನಿಗಮದ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್  19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಾ.18ರಂದು ಕೆಎ 57ಎಫ್3802 ನಂಬರಿನ ರಾಜಹಂಸ ಬಸ್ ಬೆಳಗ್ಗೆ 10ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ದಾವಣಗೆರೆಗೆ ಹೊರಟಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸಿದ್ದ ಓರ್ವ ಕೊರೋನ ಸೋಂಕಿಗೆ ಒಳಗಾಗಿದ್ದರು. ಆದ್ದರಿಂದ ಈ ಬಸ್ಸಿನಲ್ಲಿ ಪ್ರಯಾಣಿಸಿದ ಪ್ರಯಾಣಿರು  ಹತ್ತಿರದ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಅದೇ ರೀತಿ ಕೆಎ19ಎಫ್3329 ನಂಬರಿನ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮಾ.21ರಂದು ಸಂಜೆ ಪ್ರಯಾಣಿಸಿದ್ದ ಪ್ರಯಾಣಿಕರೊಬ್ಬರಿಗೆ ಕೋರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ಮಾ.21ರಂದು ಸಂಜೆ 4:30ಕ್ಕೆ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟ ಈ ಬಸ್ಸಿನಲ್ಲಿ ಪ್ರಯಾಣಿಸಿರುವವರು ಹತ್ತಿರದ ಜಿಲ್ಲಾಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವಂತೆ ಕೆಎಸ್ಸಾರ್ಟಿಸಿ ಪ್ರಟನೆಯಲ್ಲಿ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News