ಸಮುದಾಯ ಭವನಗಳಲ್ಲಿ ಕಾರ್ಮಿಕರಿಗೆ ವಸತಿ-ಊಟೋಪಚಾರ: ರಾಜ್ಯ ಸರಕಾರ ಆದೇಶ

Update: 2020-03-28 18:13 GMT

ಬೆಂಗಳೂರು, ಮಾ.28: ಕೊರೋನ ವೈರಸ್ ಸೋಂಕು ಹಿನ್ನೆಲೆಯಲ್ಲಿ ಕಾರ್ಮಿಕರ ವಸತಿಗಾಗಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಪ್ರತಿ ವಾರ್ಡಿಗೆ ಒಂದರಂತೆ ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಕಾರ್ಮಿಕರಿಗೆ ವಸತಿ ಹಾಗೂ ಊಟೋಪಚಾರ ಒದಗಿಸಲು ರಾಜ್ಯ ಸರಕಾರ ಆದೇಶ ನೀಡಿದೆ.

ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಕಾರ್ಮಿಕರ ವಲಸೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸುವ ಉದ್ದೇಶದಿಂದ ಆದೇಶವನ್ನು ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರ ವಸತಿಗಾಗಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡಗಳಲ್ಲಿ ಒಂದೊಂದರಂತೆ ಸಮುದಾಯ ಭವನ ಅಥವಾ ಕಲ್ಯಾಣ ಮಂಟಪವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ವಶಕ್ಕೆ ಪಡೆದು ಕಟ್ಟಡ ಕಾರ್ಮಿಕರಿಗೆ ಉಟೋಪಚಾರದ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News