ಬೆಂಗಳೂರು: ಒಂದು ಕೋಟಿ ದೇಣಿಗೆ ನೀಡಿದ ಹೆರಿಟೇಜ್ ಫುಡ್ಸ್

Update: 2020-03-29 16:05 GMT

ಬೆಂಗಳೂರು, ಮಾ.29: ಜಾಗತಿಕ ಮಟ್ಟದಲ್ಲಿ ಕೋವಿಡ್-19 ಸಾಂಕ್ರಾಮಿಕ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತ ಕೂಡಾ ಕೋವಿಡ್-19ನ ಬಿಸಿಯನ್ನು ಅನುಭವಿಸುತ್ತಿದ್ದು, ದೇಶಾದ್ಯಂತ ವ್ಯಾಪಕವಾಗಿ ಸೋಂಕು ಹರಡುತ್ತಿದೆ.

ಕೋವಿಡ್-19 ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ, ಜವಾಬ್ದಾರಿಯುತ ಕಾರ್ಪೊರೇಟ್ ಸಂಸ್ಥೆಯಾಗಿ ಹೆರಿಟೇಜ್ ಫುಡ್ಸ್ ಲಿಮಿಟೆಡ್ ಸರಕಾರದ ಜತೆ ಕೈಜೋಡಿಸಿದೆ.

ದೇಶಾದ್ಯಂತ ವಿವಿಧ ಕಾರ್ಯಾಚರಣೆ ಕ್ಷೇತ್ರಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಒಂದು ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡಲು ಕಂಪನಿ ನಿರ್ಧರಿಸಿದೆ. ಹಾಗೆಯೇ ಕರ್ನಾಟಕದ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ.ಗಳನ್ನು ನೀಡಲಾಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಭುವನೇಶ್ವರಿ ನಾರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News